ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಬಾಲಕನ ಸಾವಿಗೆ ಕಾರಣವಾಯ್ತೇ ವೆಬ್‌ ಧಾರಾವಾಹಿ…?

ಬೆಂಗಳೂರು : ಬೆಂಗಳೂರಿನಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಬಾಲಕನ ಜಪಾನೀಸ್ ಭಾಷೆಯ ವೆಬ್ ಸಿರೀಸ್ (Web series) ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಿ.ಕೆ ಅಚ್ಚುಕಟ್ಟು ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ.
ಆಗಸ್ಟ್ 3 ರ ಮಧ್ಯರಾತ್ರಿ ಸಿಕೆ ಅಚ್ಚುಕಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಂತರ ಪೊಲೀಸರು ಆತನ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ಆರಂಭಿಸಿದರು. ಬಾಲಕ ಈ ವೆಬ್‌ ಸರಣಿಯನ್ನು ಉತ್ಸಾಹದಿಂದ ವೀಕ್ಷಿಸುತ್ತಿದ್ದ ಮತ್ತು ತನ್ನ ಕೋಣೆಯಲ್ಲಿ ಕಾರ್ಯಕ್ರಮದ ಪಾತ್ರವನ್ನು ಚಿತ್ರಿಸಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ತನಿಖೆಯಲ್ಲಿ ಕಂಡುಬಂದ ಅಂಶವು ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದರ ಮೇಲೆ ಪ್ರಭಾವ ಬೀರಿರಬಹುದೇ ಎಂದು ಶಂಕಿಸಲು ಕಾರಣವಾಗಿದೆ.

ಜಾನಪದ ಕಲಾವಿದರಾಗಿರುವ ಗಣೇಶಪ್ರಸಾದ ಮತ್ತು ಸವಿತಾರ ಎರಡನೇ ಪುತ್ರ ಗಾಂಧಾರ (14 ವರ್ಷ) ಡೆತ್​​ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್‌ನೋಟ್‌ನಲ್ಲಿ ಪ್ರೀತಿಯ ಕುಟುಂಬ ಸದಸ್ಯರೇ, ಈ ಪತ್ರ ಯಾರೆಲ್ಲ ಓದುತ್ತಿದ್ದೀರಾ, ಅಳಬೇಡಿ. ಈಗಾಗಲೇ ಸ್ವರ್ಗದಲ್ಲಿದ್ದೇನೆ, ಮತ್ತೆ ನನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ನಿಮ್ಮ ಈಗಿನ ಸ್ಥಿತಿ ಹೇಗಿದೆ ಅನ್ನುವುದು ನನಗೆ ತಿಳಿದಿದೆ. ನಿಮಗೆ ನೋವಾಗುತ್ತೆ ಅನ್ನೋದು ನನಗೆ ತಿಳಿದಿದೆ. ಈ ಮನೆ ಚೆನ್ನಾಗಿರಬೇಕೆಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಮೇಲೆ ನಿಮಗೆ ಕೋಪ ಬರುವಂತೆ ನಡೆದುಕೊಂಡಿದ್ದೇನೆ. ನನ್ನಿಂದ ನೊಂದಿದ್ದೀರಾ, ನಿಮಗೆ ತೊಂದರೆ ಕೂಡ ನೀಡಿದ್ದೇನೆ, ಆದರೆ ನನ್ನ ಉದ್ದೇಶ ನಿಮ್ಮನ್ನು ನೋಯಿಸೋದಾಗಿರಲಿಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ. 14 ವರ್ಷಗಳ ಕಾಲ ನಾನು ಬದುಕಿದ್ದು ಅದರಲ್ಲೇ ತೃಪ್ತನಾಗಿದ್ದೇನೆ. 14 ವರ್ಷಗಳಲ್ಲಿ ನಾನು ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನಾನು ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ ಎಂದು ಅವರಿಗೆ ತಿಳಿಸಿ. ನನ್ನ ಶಾಲಾ ಸ್ನೇಹಿತರಿಗೂ ಈ ಮಾತನ್ನ ಹೇಳಿ. ಐ ಮಿಸ್ ಯೂ ಆಲ್- ಗುಡ್​ಬೈ ಅಮ್ಮ” ಎಂದು ಡೆತ್​ನೋಟ್‌ನಲ್ಲಿ ಬಾಲಕ ಡೆತ್‌ನೋಟ್‌ನಲ್ಲಿ ಬರೆದಿದ್ದನು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಮೊದಲಿಗೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರಲಿಲ್ಲ. ಆದರೆ ಇದೀಗ ಸಿ.ಕೆ ಅಚ್ಚುಕಟ್ಟು ಪೊಲೀಸ ಪ್ರಾಥಮಿಕ ತನಿಖೆ ವೇಳೆ ಬಾಲಕನ ಸಾವಿಗೆ ಜಪಾನೀಸ್ ವೆಬ್ ಸಿರೀಸ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಏಕೆಂದರೆ ಆತನ ರೂಮ್​ನಲ್ಲಿ ವೆಬ್ ಸಿರೀಸ್​ ಪಾತ್ರದ ಚಿತ್ರ ಬರೆದಿದ್ದ.
ಬಾಲಕನ ತಂದೆ-ತಾಯಿ ಶಾಲೆಯಲ್ಲಿ ಅಥವಾ ಮನೆಯಲ್ಲಾಗಲಿ ಆತನಿಗೆ ಯಾವುದೇ ಸಮಸ್ಯೆಗಳಿರಲಿಲ್ಲ ಎಂದು ಹೇಳಿದ್ದಾರೆ ಮತ್ತು ಹೀಗಾಗಿ ಬಾಲಕ ಆತ್ಮಹತ್ಯೆ ಮಾಡಿಕೊಳ್ಳಲುವಂತಹ ತೀವ್ರ ಹೆಜ್ಜೆ ಇಡಲು ಕಾರಣವಾದ ಹಿಂದಿನ ನಿಖರವಾದ ಕಾರಣಗಳು ಸ್ಪಷ್ಟವಾಗಿಲ್ಲ. ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ ಮತ್ತು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಹುಡುಗನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಜಪಾನೀಸ್‌ ವೆಬ್‌ ಧಾರಾವಾಹಿ ‘ಡೆತ್ ನೋಟ್’ ಪ್ರೌಢಶಾಲಾ ವಿದ್ಯಾರ್ಥಿಯ ಸುತ್ತವೇ ಸುತ್ತುವ ಕತೆಯಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement