ಮೈಸೂರು: ಕೂದಲು ಉದುರುತ್ತಿದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ…!

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ತಲೆಕೂದಲು ಹೆಚ್ಚಾಗಿ ಉದುರುತ್ತಿದ್ದು, ಏನು ಮಾಡಿದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಾವ್ಯಶ್ರೀ (22) ಎಂದು ಗುರುತಿಸಲಾಗಿದೆ.

ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿನ ತಮ್ಮ ಮನೆಯಲ್ಲೇ ಕಾವ್ಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ಹಲವು ದಿನಗಳಿಂದ ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದ ಕಾವ್ಯಶ್ರೀಗೆ ಕೂದಲು ಉದುರುತ್ತಿತ್ತು. ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಕೂದಲು ಸಂಪೂರ್ಣವಾಗಿ ಕಳೆದುಕೊಂಡಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement