ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ : ಪ್ರಮೋದ ಮುತಾಲಿಕ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪೆಂದು ನಾನು ಹೇಳುವುದಿಲ್ಲ, ಬಿಜೆಪಿಯವರು ಇಂತಹ ವಿಷಯ ಬಿಟ್ಟು ವೀರ್‌ ಸಾವರ್ಕರ್ ಅವರ ಬಗ್ಗೆ ಚರ್ಚೆ ಮಾಡಲಿ ಎಂದು  ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ತಪ್ಪು ಕಾಣುವುದಿಲ್ಲ. ಹಿಂದೂಗಳಲ್ಲಿ ದೇವರಿಗೂ ಮಾಂಸಾಹಾರ ಪ್ರಸಾದವನ್ನು ನೈವೇದ್ಯ ಮಾಡುವವರೂ ಇದ್ದಾರೆ. ಅದರಲ್ಲೇನು ತಪ್ಪಿದೆ ಎಂದು ಅವರು ಪ್ರಶ್ನಿಸಿದರು.

ಇದು ಚರ್ಚೆಯ ವಿಷಯವೇ ಅಲ್ಲ, ಆದರೆ ಬಿಜೆಪಿಯವರಿಗೆ ಚರ್ಚೆ ಮಾಡಲು ಬೇರೆ ವಿಷಯಗಳೇ ಇಲ್ಲ. ಅದಕ್ಕೆ ಇಂತಹದ್ದೆಲ್ಲವನ್ನೂ ಚರ್ಚೆ ಮಾಡಿತ್ತಿದ್ದಾರೆ. ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಎಂದರು.
ಈದ್ಗಾ ಮೈದಾನ ಸಾರ್ವಜನಿಕ ಸ್ವತ್ತು. ಅಲ್ಲಿ ಬೇರೆಯವರಿಗೆ ಪ್ರಾರ್ಥನೆಗೆ ಅವಕಾಶ ನೀಡುತ್ತಾರೆ. ಆದರೆ ಗಣೆಶೋತ್ಸವ ಆಚರಣೆಗೆ ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಅನುಮತಿ ಕೊಟ್ಟರೂ ಸರಿ ಕೊಡದಿದ್ದರೂ ಸರಿ ಗಣೆಶೋತ್ಸವ ಆಚರಣೆಯನ್ನು ಅಲ್ಲಿ ಮಾಡಿಯೇ ಮಾಡುತ್ತೇವೆ ಎಂದು ಪುನರುಚ್ಚರಿಸಿದರು.
ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿಯನ್ನು ಕೂಡ್ರಿಸುತ್ತೇವೆ. ಅವರೇಣು ಮಾಡುತ್ತಾರೋ ನೋಡುತ್ತೇವೆ ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement