ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.
ಈ ವಿಷಯವನ್ನು ಇಂದು, ಶುಕ್ರವಾರ ಸಿಜೆಐ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಮುಂದೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರಸ್ತಾಪಿಸಿದ್ದಾರೆ. ಬಂಧನ, ರಿಮಾಂಡ್ ಮತ್ತು ಜಾಮೀನಿನ ಕುರಿತು ಕಾನೂನು ಜಾರಿ ಸಂಸ್ಥೆಗಳು ಮತ್ತು ನ್ಯಾಯಾಲಯಗಳಿಗೆ ಮಾರ್ಗಸೂಚಿಗಳನ್ನು ರೂಪಿಸಲು ರಾಜಕೀಯ ಪಕ್ಷಗಳು ಬಯಸುತ್ತಿವೆ. “ಶೇ.೯೫ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರ ವಿರುದ್ಧ ಇವೆ. ನಾವು ಬಂಧನ ಪೂರ್ವ ಮಾರ್ಗಸೂಚಿಗಳನ್ನು ಮತ್ತು ಬಂಧನದ ನಂತರದ ಮಾರ್ಗಸೂಚಿಗಳನ್ನು ಕೇಳುತ್ತಿದ್ದೇವೆ” ಎಂದು ಸಿಂಘ್ವಿ ಹೇಳಿದರು.
ಕಾಂಗ್ರೆಸ್‌, ಶಿವಸೇನೆ, ಎಎಪಿ, ಡಿಎಂಕೆ, ಆರ್‌ಜೆಡಿ, ಭಾರತ ರಾಷ್ಟ್ರ ಸಮಿತಿ, ಎಐಟಿಸಿ, ಎನ್‌ಸಿಪಿ, ಜಾರ್ಖಂಡ್ ಮುಕ್ತಿ ಮೋರ್ಚಾ, ಜೆಡಿ (ಯು), ಸಿಪಿಐ(ಎಂ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಸಮಾಜವಾದಿ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಕೋರ್ಟ್‌ ಮೆಟ್ಟಿಲೇರಿವೆ.

ಏಪ್ರಿಲ್ 5 ರಂದು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸಲಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಸಂಸ್ಥೆಗಳು ಬಿಜೆಪಿಯ ವಿರೋಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡಿವೆ ಎಂದು ಪಕ್ಷಗಳು ಹೇಳುತ್ತವೆ. ಆ ನಾಯಕರು ಬಿಜೆಪಿಗೆ ಸೇರಿದ ನಂತರ ಅವರ ಮೇಲಿನ ಪ್ರಕರಣಗಳನ್ನು ಆಗಾಗ್ಗೆ ಕೈಬಿಡಲಾಗುತ್ತದೆ ಅಥವಾ ಸಮಾಧಿ ಮಾಡಲಾಗುತ್ತದೆ ಎಂದು ವಿರೋಧ ಪಕ್ಷಗಳು ಹೇಳಿವೆ. ಈ ಆರೋಪಗಳನ್ನು ಬಿಜೆಪಿ ನಿರಾಕರಿಸಿದ್ದು, ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ನ್ಯಾಯಾಧೀಶರು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಸಲ್ಲಿಕೆಯನ್ನು ಗಮನಿಸಿದರು, ಎರಡು ವಾರಗಳ ನಂತರ ಪ್ರಕರಣವನ್ನು ಪಟ್ಟಿ ಮಾಡಿದರು.
ಕೇಂದ್ರ ತನಿಖಾ ಸಂಸ್ಥೆಗಳು ಅನುಸರಿಸಬೇಕಾದ ಬಂಧನದ ಪೂರ್ವ ಮತ್ತು ನಂತರದ ಮಾರ್ಗಸೂಚಿಗಳನ್ನು ಸಹ ಪಕ್ಷಗಳು ಬಯಸುತ್ತಿವೆ.
ಎಎಪಿ ಮೂಲಗಳ ಪ್ರಕಾರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದೇ ಛತ್ರಿಯಡಿ ಇರದ ವಿವಿಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಈ ಹಿಂದೆ, ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ವಾಕ್ಸಮರದ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಒಂಬತ್ತು ಪ್ರತಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಪವಿತ್ರಾ ಜಯರಾಮ ಸಾವಿನ ಬೆನ್ನಲ್ಲೇ ಗೆಳೆಯ-ಕಿರುತೆರೆ ನಟ ಚಂದು ಆತ್ಮಹತ್ಯೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement