ಬಿಎಸ್​ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ನೇಣಿಗೆ ಶರಣು

ಚಾಮರಾಜನಗರ: ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಮನನೊಂದ ಅವರ ಅಭಿಮಾನಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಈತ ಗ್ರಾಮದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದು, ಯಡಿಯೂರಪ್ಪ ಅವರ ಕಟ್ಟಾ ಅಭಿಮಾನಿಯಾಗಿದ್ದರು. ಅವರು ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇಂದು (ಮಂಗಳವಾರ) ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರ ತನಿಖೆಯಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ.

ಈ ಸುದ್ದಿ ಕೇಳಿದ ಯಡಿಯೂರಪ್ಪ, ‘ನನ್ನ ರಾಜೀನಾಮೆಯಿಂದ ಮನನೊಂದ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement