ಚಿಕ್ಕಬಳ್ಳಾಪುರ | ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ತಾಯಿ, ಮಗನ ಸಜೀವ ದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿ ಹೊಡೆದ ನಂತರ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ ಆಂಧ್ರ ಮೂಲದ ತಾಯಿ ಕಲಾವತಿ (54) ಹಾಗೂ ಕಾರು ಚಾಲನೆ ಮಾಡುತ್ತಿದ್ದ ಧನಂಜಯ (34) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಬಸ್‌ ಡಿಕ್ಕಿಯಾದ ರಭಸಕ್ಕೆ ಕಾರು ಬೆಂಕಿ ಹೊತ್ತು ಉರಿದರೆ, ಬಸ್ ಪಲ್ಟಿಯಾಗಿ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಂತಾಮಣಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ಎನ್‌.ರವಿಕುಮಾರ ವಿರುದ್ಧ ಎಫ್‌ಐಆರ್‌ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement