ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ’ ಸಭೆ: ನಿರ್ಬಂಧಗಳು ಇನ್ನಷ್ಟು ಸಡಿಲ..?

ಬೆಂಗಳೂರು: ನಾಳೆ ಕೋವಿಡ್ ನಿಯಂತ್ರಣ ಸಭೆ ನಡೆಯುತ್ತಿದ್ದು, ಸಭೆಯ ನಂತರ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ.
ಕೋವಿಡ್ ನಿಯಂತ್ರಣಕ್ಕಾಗಿ ಈಗ ನೈಟ್ ಕರ್ಫ್ಯೂ ( Night Curfew ) ಹಾಗೂ ಹೆಚ್ಚು ಜನರು ಸೇರುವುದಕ್ಕೆ ನಿರ್ಬಂಧವಿದೆ. ಈಗಾಗಲೇ ರಾತ್ರಿ ಕರ್ಫ್ಯೂ ಅವಧಿ ಕಡಿತ ಮಾಡುವಂತೆ ಹೋಟೆಲ್ ಮಾಲೀಕರು ಸೇರಿದಂತೆ ಹಲವರು ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ. ಇದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಕೋವಿಡ್ ನಿಯಂತ್ರಣ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ ಕೋವಿಡ್ ಉಸ್ತುವಾರಿ ಸಚಿವರಾದಂತ ಸಚಿವ ಸುಧಾಕರ, ಆರ್ ಅಶೋಕ್, ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಕೋವಿಡ್ ನಿಯಂತ್ರಣ ಸಮಿತಿಯ ತಜ್ಞರು ಕೂಡ ಭಾಗಿಯಾಗಲಿದ್ದಾರೆ.
ನಾಳೆ ನಡೆಯುತ್ತಿರುವಂತ ಸಭೆ ತೀವ್ರ ಕುತೂಹಲ ಮೂಡಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಕಠಿಣ ನಿಯಮಗಳಲ್ಲಿ ಒಂದಷ್ಟು ಸಡಿಲ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ಮುಖ್ಯವಾಗಿ ರಾತ್ರಿ ಕರ್ಫ್ಯೂ ಅವಧಿ ಕಡಿತ, ಕಠಿಣ ನಿಯಮಗಳಲ್ಲಿ ಕೆಲ ವಿನಾಯಿತಿ ನೀಡಬಹುದು ಎಂದು ಹೇಳಲಾಗುತ್ತಿದೆ. ನಾಳೆ, ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿರುವಂಕ ಕೋವಿಡ್ ಸಭೆಯ ಬಳಿಕ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಪ್ರಕಟವಾಗಲಿದೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement