ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ: ಯಡಿಯೂರಪ್ಪ

ಬೆಂಗಳೂರು: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಸಾಮೂಹಿಕ ಪ್ರಯತ್ನದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮ ಜನ್ಮದಿನದ ಸಂಭ್ರಮಾಚರಣೆ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಧಿಕಾರ ಇಲ್ಲದೆ ಇದ್ದರೂ ಸಹ ಸಾವಿರಾರು ಜ‌ನ ಬಂದು ಆಶೀರ್ವಾದ ಮಾಡಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಕಾಂಗ್ರೆನ್‌ನವರ ಬೂಟಾಟಿಕೆ ನಡೆಯೋದಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಜನ ನಿಶ್ಚಿತವಾಗಿ ನಮಗೆ ಆಶೀರ್ವಾದ ಮಾಡಲಿದ್ದಾರೆ ಎನ್ನುವ ಭರವಸೆ ಇದೆ. ವಿಧಾನ ಮಂಡಲ ಅಧಿವೇಶನ ಆದ ನಂತರ ಪ್ರವಾಸ ಆರಂಭಿಸುತ್ತೇನೆ ಎಂದು ತಿಳಿಸಿದರು.
ರಷ್ಯಾ – ಉಕ್ರೇನ್ ಮಧ್ಯೆ ನಡೆಯುತ್ತಿರುವ ಯುದ್ಧದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾರತೀಯರನ್ನು ಕರೆ ತರುವ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದೆ. ಇದುವರೆಗೂ ಯಾರಿಗೂ ತೊಂದರೆಯಾಗಿಲ್ಲ. ಯಾರೂ ಗಾಬರಿಪಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಆಸಕ್ತಿ ವಹಿಸಿ ವಿಮಾನಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ತಂದೆ ತಾಯಿಗಳು ಆತಂಕಕ್ಕೆ ಒಳಗಾಗದೆ ಸಹಕಾರ ನೀಡಬೇಕು ಎಂದರು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement