ಸೋನು ಸೂದ್ ಮತಗಟ್ಟೆಗಳಿಗೆ ಭೇಟಿ ನೀಡುವುದು ತಡೆದ ಚುನಾವಣಾ ಆಯೋಗ

ಮೊಗಾ (ಪಂಜಾಬ್‌): ಬಾಲಿವುಡ್ ನಟ ಸೋನು ಸೂದ್ ಅವರು ಪಂಜಾಬ್ ನ ಮೊಗಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರನ್ನು ತಡೆಯಲಾಗಿದೆ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ ಘಟನೆ ಭಾನುವಾರ ನಡೆದಿದೆ.
ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು, ಸೋಮವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಮೊಗಾದಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಹೋದರಿ ಮಾಳವಿಕಾ ಅವರ ಪರವಾಗಿ ಕೆಲಸ ಮಾಡುತ್ತಿರುವ ಸೋನು ಸೂದ್ ಅವರು ಮತಗಟ್ಟೆಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗದ ಸೂಚನೆ ಮೇಲೆ ಅವರನ್ನು ತಡೆಯಲಾಗಿದೆ.
ಸೋನು ಸೂದ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅವರ ಕಾರನ್ನು ಜಪ್ತಿ ಮಾಡಿ ಮನೆಗೆ ವಾಪಸ್ ಕಳುಹಿಸಲಾಗಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೊಗಾ ಜಿಲ್ಲೆಯ ಪಿಆರ್ ಓ ಪ್ರದ್ಭದೀಪ್ ಸಿಂಗ್ ಹೇಳಿದ್ದಾರೆ.
ವಿಶೇಷವಾಗಿ ಅಕಾಲಿದಳದ ಜನರು ವಿವಿಧ ಬೂತ್‌ಗಳಲ್ಲಿ ಬೆದರಿಕೆ ಹಾಗೂ ಕೆಲವು ಬೂತ್‌ಗಳಲ್ಲಿ ಹಣ ಹಂಚಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಆದ್ದರಿಂದ ಪರಿಶೀಲಿಸಿ ನ್ಯಾಯಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯ. ಅದಕ್ಕಾಗಿಯೇ ಹೋಗಿದ್ದೆವು. ನ್ಯಾಯಯುತ ಚುನಾವಣೆ ನಡೆಯಬೇಕು” ಎಂದು ಸೋನು ಸೂದ್ ಹೇಳಿದ್ದಾರೆ.
ಈ ವರ್ಷದ ಜನವರಿ 10 ರಂದು, ಮಾಳವಿಕಾ ಸೂದ್ ಮೊಗಾದಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ರಾಜ್ಯದ 2.14 ಕೋಟಿ ಮತದಾರರು ಭಾನುವಾರ 117 ಕ್ಷೇತ್ರಗಳಿಂದ ಕಣದಲ್ಲಿರುವ 1304 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಷೇರು ಮಾರುಕಟ್ಟೆಯಲ್ಲಿ ಭಾರತದ ರಕ್ಷಣಾ ಕಂಪನಿಗಳಿಗೆ ಹೆಚ್ಚಿದ ಬೇಡಿಕೆ, ಚೀನಾ-ಟರ್ಕಿ ಕಂಪನಿಗಳ ಬೇಡಿಕೆ ಕುಸಿತ...!

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement