ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು.
ಮಠಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪರ್ಯಾಯ ಪೀಠ ಅಲಂಕರಿಸಿರುವ ಶಿರೂರು ಮಠಕ್ಕೆ ಭೇಟಿ ನೀಡಿ, ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರಿಂದ ಆಶೀರ್ವಾದ ಪಡೆದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಂಗಳೂರು : ಮೊಬೈಲ್‌ ಫೋನ್‌ ವಿಚಾರಕ್ಕೆ ಜಗಳ ; ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

ನಿಮ್ಮ ಕಾಮೆಂಟ್ ಬರೆಯಿರಿ

advertisement