ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ ; ಪತಿ ನಿವೃತ್ತಿಯ ಬೆನ್ನಲ್ಲೇ ಪತ್ನಿಗೆ ಅದೇ ಹುದ್ದೆ…

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಜುಲೈ 31ಕ್ಕೆ ನಿವೃತ್ತಿಯಾಗಲಿರುವ ರಜನೀಶ ಗೋಯೆಲ್‌ ಅವರ ಸ್ಥಾನಕ್ಕೆ ಅವರ​ ಪತ್ನಿ ಶಾಲಿನಿ ರಜನೀಶ ಅವರನ್ನು ನೇಮಕ ಮಾಡಲು ಶುಕ್ರವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು, ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್. ಕೆ. ಪಾಟೀಲ, ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್ ಅವರು ಇನ್ನು ಐದು ದಿನದಲ್ಲಿ​ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ ಅವರನ್ನು ನೇಮಕ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿಯಾದ ಬೆನ್ನಲ್ಲೇ ಅದೇ ಹುದ್ದೆಯನ್ನು ಅವರು ಪತ್ನಿ ನಿಭಾಯಿಸಲಿದ್ದಾರೆ.
ರಜನೀಶ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯಗೊಳ್ಳಲಿದೆ, ಹೀಗಾಗಿ ನೂತನ ಮುಖ್ಯ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಈಗ ಅದಕ್ಕೆ ತೆರೆ ಬಿದ್ದಿದೆ. 1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement