ಮಂಗಳೂರು/ಉಡುಪಿ : ಧಾರಾಕಾರ ಮಳೆ ಹಿನ್ನಲೆ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 20 (ಶನಿವಾರ )ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ತೀವ್ರ ಮಳೆ ಹಿನ್ನಲೆಯಲ್ಲಿ ಜುಲೈ 20 ರಂದು ಜಿಲ್ಲೆಯ ಶಾಲೆ, ಪಿಯುಸಿ ತರಗತಿಗೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶನಿವಾರ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 20 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ