ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಿತ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ (SIT) ರಚಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದ್ದು, ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೊ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್ : ಸಂತ್ರಸ್ತ ಮಹಿಳೆ ವೀಡಿಯೊ ವೈರಲ್‌

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದು, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು. ಅದರ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement