ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ (65) ಮೃತರು ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ ಅವರು ಮಗಳ ಮನೆಗೆ ಶುಂಠಿ ಬಿತ್ತನೆಗೆ ಬಂದಿದ್ದರು ಎನ್ನಲಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಹೊಲದಲ್ಲಿ ಇನ್ನು ಕೆಲವರು ಕೆಲಸ ಮಾಡುತ್ತಿದ್ದರು, ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ