ಬೆಂಗಳೂರು: ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಕೇರಳದಲ್ಲಿ ಏ. 14ರವರೆಗೂ ಮಳೆಯಾಗುವ ನಿರೀಕ್ಷೆಯಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಮಳೆಯಾಗಿತ್ತು. ಆದರೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಕೇರಳದಲ್ಲಿ ಏ. 14ರ ವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹೇಳಲಾಗಿದೆ.
ಮುಂದಿನ 3 ದಿನಗಳವರೆಗೆ ತಮಿಳುನಾಡು-ಪುದುಚೇರಿ-ಕಾರೈಕಲ್, ಲಕ್ಷದ್ವೀಪ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ. ಕೇರಳ-ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮುಂದಿನ 4 ದಿನಗಳವರೆಗೆ ತಮಿಳುನಾಡು-ಪುದುಚೇರಿ-ಕಾರೈಕಲ್, ಲಕ್ಷದ್ವೀಪ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ