ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಬಿಡುಗಡೆ

ಬೆಂಗಳೂರು: ಚುನಾವಣೆಯಲ್ಲಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಹಿಂದು ಕಾರ್ಯಕರ್ತೆ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ. ಅ
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಸೆಪ್ಟೆಂಬರ್‌ 12ರಂದು ಚೈತ್ರಾ ಅವರನ್ನು ಉಡುಪಿಯಲ್ಲಿ ಬಂಧಿಸಲಾಗಿತ್ತು. ಅದೇ ಸಂದರ್ಭದಲ್ಲಿ ಅವರ ಸಹಚರ ಗಗನ ಕಡೂರ್‌, ಪ್ರಜ್ವಲ, ಶ್ರೀಕಾಂತ ಶ್ರೀಕಾಂತ, ಹಾಲಶ್ರೀ ಸ್ವಾಮೀಜಿ ಸೇರಿದಂತೆ 9 ಮಂದಿಯನ್ನು ಸಿಸಿಬಿ ತಂಡವು ಉಡುಪಿ ಹಾಗೂ ಇತರ ಕಡೆ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು.
ಹಾಲಶ್ರೀ ಸ್ವಾಮೀಜಿಗೆ ನವೆಂಬರ್‌ 11ರಂದು ಕೋರ್ಟ್‌ ಜಾಮೀನು ನೀಡಿತ್ತು. ಇದೀಗ ಪ್ರಕರಣದ ಮೊದಲ ಆರೋಪಿ ಚೈತ್ರಾ ಮತ್ತು ಏಳನೇ ಆರೋಪಿ ಶ್ರೀಕಾಂತಗೆ 3ನೇ ಎಸಿಎಂಎಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದ ಕೋರ್ಟ್‌ ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಎರಡು ಲಕ್ಷ ಬಾಂಡ್ ನೀಡುವಂತೆ ಸೂಚಿಸಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement