ತಣ್ಣಗಾಗದ ಖಾತೆಗಾಗಿ ಕ್ಯಾತೆ: ಈಗ ಶಾಸಕ ಕಚೇರಿ ಬೋರ್ಡ್‌ ತೆರವಿಗೆ ಮುಂದಾದ ಆನಂದ ಸಿಂಗ್‌..!

ಬಳ್ಳಾರಿ: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ತಮ್ಮ ಶಾಸಕರ ಕಚೇರಿಯ ಬೋರ್ಡ್ ತೆರವುಗೊಳಿಸುತ್ತಿದ್ದು, ಇದನ್ನು ಅಸಮಾದಾನದ ಕಾರಣಕ್ಕೆ ತೆಗೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರವಾಸೋದ್ಯಮ ಖಾತೆ ನೀಡಿದ ಕಾರಣಕ್ಕೆ ಅಸಮಾದಾನಗೊಂಡಿರುವ ಆನಂದ್ ಸಿಂಗ್, ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯನ್ನೂ ಆಗಿದ್ದರು. ಆದರೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆಯದ ಹಿನ್ನೆಲೆ ಕಳೆದ 14 ವರ್ಷದಿಂದ ಹೊಸಪೇಟೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಕಚೇರಿಯನ್ನು ತೆರವುಗೊಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಹೊಸಪೇಟೆ ಶಾಸಕರ ಕಚೇರಿ ಬೋರ್ಡ್ ತೆರವುಗೊಳಿಸಿ ಸಂಪೂರ್ಣ ಕಚೇರಿ ಬಂದ್ ಮಾಡಲು ಮುಂದಾಗಿದ್ದಾರೆ. ಕ್ರೇನ್ ಮೂಲಕ ಕಚೇರಿಯನ್ನು ತೆರವುಗೊಳಿಸುತ್ತಿದ್ದಾರೆ.
ಈ ಹಿಂದೆಯೂ ಸಮ್ಮಿಶ್ರ ಸರ್ಕಾರದಲ್ಲಿ ಮುನಿಸಿಕೊಂಡು ಆನಂದ ಸಿಂಗ್ ರಾಜೀನಾಮೆ ನೀಡಿದ್ದರು. ಇದೀಗ ಆನಂದ್ ಸಿಂಗ್ ನಡೆಯಿಂದ ಬಿಜೆಪಿಯಲ್ಲಿ ಭಿನ್ನಮತೀಯ ಚಟುವಟಿಕೆ ಜೋರಾಗುವ ಲಕ್ಷಣಗಳಿವೆ. ಆದರೆ ಬಿಜೆಪಿ ಹೈಕಮಾಂಡ್‌ ಇವರು ಹೇಳಿದಂತೆ ಕೇಳುವ ಸ್ಥಿತಿಯಲ್ಲಿದೆಯೇ ಎಂಬ ಪ್ರಶ್ನೆಯೂ ಏಳುತ್ತದೆ.
ಆನಂದ್ ಸಿಂಗ್ ಬೆನ್ನಲ್ಲೇ ಮತ್ತೋರ್ವ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿ, ಎರಡ್ಮೂರು ದಿನಗಳಲ್ಲಿ ತಮ್ಮ ನಿರ್ಧಾರ ತಿಳಿಸುವದಾಗಿ ಹೇಳಿದ್ದಾರೆ ಎಂದು ವರದಿಯಾಗಿತ್ತು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement