ಗ್ರಾಮೀಣದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ದಾಖಲು ಕಡ್ಡಾಯ, ಮದುವೆ ಕಾರ್ಯಕ್ರಮಕ್ಕೆ ಕಟ್ಟುನಿಟ್ಟು

ಬೆಂಗಳೂರು:ರಾಜ್ಯದ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಸರ್ಕಾರ ಮುಂದಾಗಿದ್ದು, ಗ್ರಾಮೀಣ ಭಾಗದಲ್ಲಿ ಸೋಂಕಿಗೆ ಒಳಗಾಗುವವರನ್ನು ಮನೆಯಲ್ಲೇ ಐಸೋಲೇಷನ್‌ಗೆ ಬಿಡದೆ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲು ಮಾಡುವ ನಿರ್ಧಾರವನ್ನು ಕೊರೊನಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಕೈಗೊಳ್ಳಲಾಗಿದೆ,
ರಾಜ್ಯದ ಗ್ರಾಮಾಂತರ ಭಾಗಗಳಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕಿನ ನಿಗ್ರಹಕ್ಕೆ ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಶನಿವಾರ ಟಾಸ್ಕ್‌ಫೋರ್ಸ್‌ನ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
ಹಳ್ಳಿಗಳಲ್ಲಿ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕಠಿಣ ಕ್ರಮಗಳು. ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿ ಹಳ್ಳಿಗಳಲ್ಲಿ ಸೋಂಕಿಗೆ ಒಳಗಾಗುವವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಿಸುವ ತೀರ್ಮಾನಕ್ಕೆ ಬರಲಾಯಿತು.
ಹಳ್ಳಿಗಳಲ್ಲಿ ಮತ್ತು ನಗರ ಪ್ರದೇಶದ ಕೊಳಚೆ ಪ್ರದೇಶಗಳಲ್ಲಿ ವಾಸಿಸುವವರಿಗೆ ಸೋಂಕು ತಗುಲಿದರೆ ಅವರು ಮನೆಯಲ್ಲೇ ಐಸೋಲೇಷನ್ ಆಗಲು ಸೂಕ್ತ ಸೌಲಭ್ಯ ಸೌಕರ್ಯಗಳು ಇಲ್ಲದ ಕಾರಣ ಇವರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವ ತೀರ್ಮಾನ ಮಾಡಲಾಗಿದೆ.ಇವರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಕಡ್ಡಾಯವಾಗಿ ದಾಖಲಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ.
ಲಾಕ್‌ಡೌನ್ ಜಾರಿಯಿದ್ದರೂ ಹಳ್ಳಿಗಳಲ್ಲಿ ಮದುವೆ, ಮತ್ತಿತರ ಸಮಾರಂಭಗಳು ಎಗ್ಗಿಲ್ಲದೆ ನಡೆದಿದೆ. ಈ ಮದುವೆ ಮತ್ತಿತರ ಸಮಾರಂಭಗಳಲ್ಲಿ ಜನ ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳತ್ತಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಮದುವೆ ಸಮಾರಂಭಗಳಿಗೆ ಹೆಚ್ಚು ಜನ ಸೇರದಂತೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯತೆಯನ್ನು ಸಭೆಯಲ್ಲಿ ಪ್ರತಿಪಾದಿಸಲಾಯಿತು. ಹಾಗಾಗಿ. ಗ್ರಾಮೀಣ ಭಾಗದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆಯೂ ಚರ್ಚೆಗಳು ನಡೆದಿವೆ.

ಪ್ರಮುಖ ಸುದ್ದಿ :-   ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement