ಕೆಯುಡಬ್ಲ್ಯುಜೆ ರಾಜ್ಯ ಸಮಿತಿಗೆ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನ

ಹುಬ್ಬಳ್ಳಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ( ಕೆಯುಡಬ್ಲ್ಯುಜೆ) ರಾಜ್ಯ ಕಾರ್ಯಕಾರಿ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನಾಮನಿರ್ದೇಶನಗೊಂಡಿದ್ದಾರೆ.
ಏಪ್ರಿಲ್‌ 12ರಂದು ಬೀದರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ ಈ ನಾಮನಿರ್ದೇಶನ ಮಾಡಿದ್ದಾರೆ.
ಹುಬ್ಬಳ್ಳಿ ಸಂಜೆ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಗಂಗೊಳ್ಳಿಯವರು ಈ ಹಿಂದೆ ಧಾರವಾಡ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಎರಡು ಅವಧಿ ಹಾಗೂ ರಾಜ್ಯ ಸಮಿತಿ ಸದಸ್ಯರಾಗಿ ಒಂದು ಅವಧಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಮಾಧ್ಯಮ ಮಾನ್ಯತಾ ಸಮಿತಿಯ ಸದಸ್ಯರೂ ಆಗಿದ್ದಾರೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ಲೆ ಗ್ರಾಮದ ಗಂಗೊಳ್ಳಿಯವರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement