ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.
ಉತ್ತರ ಭಾರತದಲ್ಲಿ ಹಿಮಾಚಲಪ್ರದೇಶ, ಉತ್ತರಾಖಂಡ್, ಜಮ್ಮುಕಾಶ್ಮೀರ, ಪಂಜಾಬ್, ಹರ್ಯಾಣ ರಾಜ್ಯಗಳು ಕುಂಭದ್ರೋಣ ಮಳೆಗೆ (Heavy Rainfall) ತತ್ತರಿಸಿವೆ. ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಎರಡು ದಿನಗಳಲ್ಲಿ ಕನಿಷ್ಠ 19 ಮಂದಿ ಸಾವಿಗೀಡಾಗಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ