ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್‌ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಲಾಗಿದೆ” ಎಂದು ಏಪ್ರಿಲ್ 13 ರಂದು ಹೊರಡಿಸಲಾದ ಸರ್ಕಾರಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ ಬೆಳವಣಿಗೆಯಲ್ಲಿ ಶಮನ ಆಗಿಲ್ಲ. ದಾವಣಗೆರೆಯಲ್ಲಿ ಅಭ್ಯರ್ಥಿ ವಿಚಾರವಾಗಿ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಪತ್ರಿಕಾಗೋಷ್ಠಿಯನ್ನು ನಡೆಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಅವರನ್ನು ಸೋಲಿಸಲು ಕಾಂಗ್ರೆಸ್ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದರು.
ಇದರ ನಂತರ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಬಳಿಕ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜನೆ ಮಾಡಲಾಗಿದೆ.
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಸಹ ಈಗ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement