ಅಸ್ಸಾಂ, ಬಂಗಾಳದಲ್ಲಿ ಕಂಪಿಸಿದ ಭೂಮಿ

ಗುವಾಹಟಿ: ಮೂರನೇ ಹಂತದ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಆರಂಭಕ್ಕೆ ಕೆಲವು ಗಂಟೆ ಬಾಕಿ ಇರುವಂತೆ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ.
ನೇಪಾಳ ಮತ್ತು ಸಿಕ್ಕಿಂ ಗಡಿ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಭಾರತೀಯ ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 5.4ರಷ್ಟಿದೆ ಎಂದು ಗೊತ್ತಾಗಿದೆ.ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 6ರಂದು ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಚುನಾವಣೆ ಮತ್ತು ಅಸ್ಸಾಂನಲ್ಲಿ ಕೊನೆಯ ಹಂತದ ಚುನಾವಣೆ ನಡೆಯಲಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement