ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಹಗರಣ ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ ಪ್ರಕರಣ ಹಾಗೂ ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅವ್ಯವಹಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಶನಿವಾರ ಸಿಬಿಐಗೆ ವಹಿಸಿದೆ.
ಈ ವರ್ಷ ಜನವರಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಅಂದಿನ ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಜಾರಿಗೊಳಿಸಿರಲಿಲ್ಲ. ಈಗ ರಾಜ್ಯ ಸರ್ಕಾರ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಹಾಗೂ ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಹಗರಣವನ್ನು ಸಿಬಿಐ ವಹಿಸಿದೆ.
ಗುರು ರಾಘವೇಂದ್ರ ಬ್ಯಾಂಕಿನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ.

ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಸಂಸ್ಥೆಯ ಆಡಳಿತ ಮಂಡ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರಿ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ಈ ಪ್ರಕರಣದಲ್ಲಿ ಸಂಸ್ಥೆಯ ಅಧ್ಯಕ್ಷ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು.
ಬೆಂಗಳೂರಿನ ಹನುಮಂತ ನಗರದಲ್ಲಿರುವ ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದಲೂ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಂಕ್ ಅಧ್ಯಕ್ಷರ ಮಗನ ಹೆಸರಲ್ಲೇ ಅನೇಕ ರೀತಿಯ ಲೋನ್ ಗಳನ್ನ ನೀಡಲಾಗಿದೆ ಎಂದು ಹಲವಾರು ಗ್ರಾಹಕರು ಆರೋಪಿಸಿದ್ದರು. ಈಗ ರಾಜ್ಯ ಸರ್ಕಾರ ಈಗ ಇದರ ತನಿಖೆಯನ್ನು ಸಿಬಿಐಗೆ ವಹಿಸಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement