ನಿಗಮ-ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ : ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ-ಮಂಡಳಿ ಅಧ್ಯಕ್ಷರ ನೇಮಕಕ್ಕೆ ಅಂತಿಮಗೊಳಿಸಿ ಕಳುಹಿಸಿರುವ ಪಟ್ಟಿಗೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ ಸೋಮವಾರ ದೆಹಲಿಗೆ ತೆರಳುತ್ತಿದ್ದಾರೆ.
ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸಿಕೊಂಡು ಬರುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.
ದೆಹಲಿಗೆ ಹೋಗುವ ಮುನ್ನ ಸೋಮವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ವರಿಷ್ಠರಿಗೆ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ. ಈಗ ದೆಹಲಿಯಲ್ಲಿ ಈ ಪಟ್ಟಿ ಅಂತಿಮವಾಗುತ್ತಿದೆ” ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೋಗಿ ಭೇಟಿ ಮಾಡಲಿದ್ದಾರೆ” ಎಂದು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement