ಅಮೂಲ್ ಜೊತೆ ನಂದಿನಿ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ(KMF)ದ ನಂದಿನಿ ಉತ್ಪನ್ನವನ್ನು ಗುಜರಾತಿನ ಅಮೂಲ್ ಜೊತೆಗೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಂದಿನಿ ವಿಲೀನವಾಗುತ್ತದೆ ಎಂದು ಯಾರೂ ಊಹೆ ಮಾಡಿ ಏನೇನೋ ಹೇಳಬಾರದು ನಂದಿನಿ ಉತ್ಪನ್ನವನ್ನು ಅಮೂಲ್ ಜೊತೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆ ವಿಚಾರದಲ್ಲಿ ಸಹಕಾರ ಮಾಡಬೇಕು. ಪೂರಕವಾಗಿ ಕೆಲಸ ಮಾಡಬೇಕು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿದ್ದಾರೆ. ವಿಲೀನಗೊಳಿಸುವ ಬಗ್ಗೆ ಅವರು ಹೇಳಿಲ್ಲ.. ನಂದಿನಿ ಅಸ್ತಿತ್ವ ಶಾಶ್ವತವಾಗಿ ಇರಲಿದೆ ಎಂದರು.
ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮೂಲ್ ತಾಂತ್ರಿಕ ವಿಷಯವನ್ನು ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಇದರಲ್ಲಿ ರಾಜಕಾರಣ ಮಾಡುವುದು ಯಾಕೆ.? ನಾನು ಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವ ಕಾಯ್ದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರು : ಓವರ್‌ಟೇಕ್‌ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ ಪುತ್ರನ ವಿರುದ್ಧ ದೂರು

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement