೧೩ರಂದು ರಾಜ್ಯದಲ್ಲಿ ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಗಾಳಿ ಪ್ರತಿ ಗಂಟೆಗೆ ಜೋರಾಗಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಅರಬ್ಬಿ ಸಮುದ್ರದಲ್ಲಿ ಗಾಳಿ ಹೆಚ್ಚಾಗಿದ್ದು ಗಂಟೆಗೆ ೪೦-೫೦ ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಈ ಕಾರಣದಿಂದ ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ,ದಕ್ಷಿಣ ಕನ್ನಡ, ಉಡುಪಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾ.೧೩ರಂದು ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

 

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊ | ಕಾರವಾರದಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಮಾಲ್ವನ್

ನಿಮ್ಮ ಕಾಮೆಂಟ್ ಬರೆಯಿರಿ

advertisement