ಹುಬ್ಬಳ್ಳಿ: ರಾಯನಾಳ ಗ್ರಾಮ ಪಂಚಾಯತ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಸೋಮವಾರ ರಾತ್ರಿ ರಾಯನಾಳ ಬಳಿ ನಡೆದ ಬಗ್ಗೆ ವರದಿಯಾಗಿದೆ.
ರಾಯನಾಳ ಗ್ರಾ.ಪಂ ಸದಸ್ಯ ಗಂಗಿವಾಳ ಗ್ರಾಮದ ದೀಪಕ ಪಟದಾರಿ ಎಂಬವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದು, ಹಳೆ ದ್ವೇಷ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆಂದು ಪೊಲೀಸ್ ಮೂಲಗಳು ಶಂಕಿಸಿವೆ, ತನಿಖೆ ಚುರುಕುಗೊಳಿಸಲಾಗಿದೆ.
ದೀಪಕಕುಟುಂಬದವರ ವಿರೋಧಗಳ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ. ಜೊತೆಗೆ ಆಸ್ತಿ ವಿಚಾರವಾಗಿಯೂ ದ್ವೇಷಕ್ಕೆ ಕೊಲೆಯಾಗಿರಬಹುದು. ದ್ವೇಷದಿಂದಸೋಮವಾರ ರಾತ್ರಿ ಬೈಕ್ ನಲ್ಲಿ ದೀಪಕ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಾಯನಾಳ ಬಳಿ ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆದಿದೆ.


ನಿಮ್ಮ ಕಾಮೆಂಟ್ ಬರೆಯಿರಿ