7ನೇ ವೇತನ ಆಯೋಗದ ವರದಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಲಾಗಿದ್ದ 7ನೇ ವೇತನ ಆಯೋಗದ ವರದಿ ಸಲ್ಲಿಕೆ ಅವಧಿಯನ್ನು 6 ತಿಂಗಳ ಕಾಲ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.
ರಾಜ್ಯಸರ್ಕಾರ 2022ರ ನವೆಂಬರ್‌ 19 ರಂದು ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿ, 6 ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಲಾಗಿತ್ತು. 7ನೇ ರಾಜ್ಯ ವೇತನ ಆಯೋಗವು ತನ್ನ ಕಾರ್ಯಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಕಾಲಾವಧಿಯನ್ನು ಮೇ 19 ರಿಂದ 6 ತಿಂಗಳವರೆಗೆ ವಿಸ್ತರಿಸಿ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ನಿಮ್ಮ ಕಾಮೆಂಟ್ ಬರೆಯಿರಿ

advertisement