ವಿನಯ ಕುಲಕರ್ಣಿಗೆ ಧಾರವಾಡ ಪ್ರವೇಶಿಸಲು ಅನುಮತಿ ನಿರಾಕರಿಸಿದ ಕೋರ್ಟ್‌

ಬೆಂಗಳೂರು: ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತವರು ಜಿಲ್ಲೆಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಯಂತಕುಮಾರ ಅವರು ಅರ್ಜಿಯನ್ನು ವಜಾಗೊಳಿಸಿದರು. ನ್ಯಾಯಾಲಯದ ಈ ಆದೇಶದಿಂದಾಗಿ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ವಿನಯ ಕುಲಕರ್ಣಿ ಅವರ ಧಾರವಾಡಕ್ಕೆ ತೆರಳುವ ಕನಸು ಭಗ್ನಗೊಂಡಿದೆ. ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸುವುದಕ್ಕೂ ಕಷ್ಟವಾಗಲಿದೆ. ಆದರೆ ಸೂಚಕರ ಮೂಲಕ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.
ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿತ್ತು. ಈಗ ಚುನಾವಣೆ ಸ್ಪರ್ಧೆಯ ಹಿನ್ನೆಲೆಯಲ್ಲಿ ತಮಗೆ ಧಾರವಾಡ ಪ್ರವೇಶಿಸಲು ಅನುಮತಿ ಕೋರಿ ವಿನಯ ಕುಲಕರ್ಣಿ ವತಿಯಿಂದ ಅರ್ಜಿ ಸಲ್ಲಿಸಲಾಗಿತ್ತು.
2016ರಲ್ಲಿ ನಡೆದ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯನ ಹತ್ಯೆಯ ಹಿಂದೆ ಕೈವಾಡ ಶಂಕೆಯ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿನಯ್​ ಕುಲಕರ್ಣಿ ಅವರನ್ನು ಬಂಧಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement