ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ : ಸ್ವಾಮೀಜಿಗಳ ನಿಯೋಗದಿಂದ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು : ಲಿಂಗಾಯತ ಮಠಾಧೀಶರ ನಿಯೋಗ ಸೋಮವಾರ (ಜನವರಿ 8) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮನವಿ ಮಾಡಿದೆ.
ಬಸವಲಿಂಗ ಪಟ್ಟಾದೇವರು ಸ್ವಾಮೀಜಿ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಜಗಜ್ಯೋತಿ ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿ ಘೋಷಿಸುವಂತೆ ಒತ್ತಾಯಿಸಿತು. ಇದಕ್ಕೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ಈ ವಿಚಾರವನ್ನು ಸಚಿವ ಸಂಪುಟದ ಮುಂದಿಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ವಾಂೀಜಿಗಳ ನಿಯೋಗಕ್ಕೆ ತಿಳಿಸಿದರು.

ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ತರಳಬಾಳು ಶ್ರೀಗಳು, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಡಾ.ಗಂಗಾಬಿಕೆ ಅಕ್ಕ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ ಒಟ್ಟು 48 ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದರು.
ಅಲ್ಲದೆ, ಸಚಿವರಾದ ಎಂ.ಬಿ.ಪಾಟೀಲ, ಈಶ್ವರ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ, ವಸುಂಧರ ಭೂಪತಿ ಮೊದಲಾದವರು ಇದ್ದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement