ಹೊನ್ನಾವರ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಾಳೆ, ಶನಿವಾರ (ಮೇ 6) ಚುನಾವಣಾ ಪ್ರಚಾರಕ್ಕಾಗಿ ಹೊನ್ನಾವರಕ್ಕೆ ಆಗಮಿಸಲಿದ್ದಾರೆ. ಮೇ 6ರಂದು ಮಧ್ಯಾಹ್ನ 2:30 ಗಂಟೆಗೆ ಪಟ್ಟಣದ ಸೇಂಟ್ ಅಂತೋನಿ ಪ್ರೌಢಶಾಲಾ ಮೈದಾನದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ತಿಳಿಸಿದರು.
ಪಟ್ಟಣದಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಸುಮಾರು 20 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಕಳೆದ ಬಾರಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು. ಈ ಬಾರಿ ಆರಕ್ಕೆ ಆರು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲುವನ್ನು ಪಕ್ಷದ ವರಿಷ್ಠರ ನಿರೀಕ್ಷಿಸಿದ್ದಾರೆ ಎಂದರು.


ನಿಮ್ಮ ಕಾಮೆಂಟ್ ಬರೆಯಿರಿ