ಶಿರಸಿ: ಜುಲೈ 13ರಿಂದ ಸ್ವರ್ಣವಲ್ಲಿ ಶ್ರೀಗಳ ಚಾತುರ್ಮಾಸ್ಯ ಆರಂಭ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ 32ನೇ ಚಾತುರ್ಮಾಸ್ಯ ಜುಲೈ 13ರ ಆಷಾಢ ಪೂರ್ಣಿಮೆಯಿಂದ ಆರಂಭವಾಗಿ ಸೆಪ್ಟೆಂಬರ್‌ 10ರ ವರೆಗೆ ಸ್ವರ್ಣವಲ್ಲೀ ಮಠದಲ್ಲಿ ನಡೆಯಲಿದೆ.

ಅಂದು ಶ್ರೀಗಳು ವ್ಯಾಸ ಪೂಜೆ‌ ಸಲ್ಲಿಸಿ ವ್ರತ ಸಂಕಲ್ಪ ಮಾಡಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ‌ ನಡೆಸಲಿದ್ದಾರೆ. ಮಧ್ಯಾಹ್ನ ೩ಕ್ಕೆ ನಡೆಯುವ ಧರ್ಮಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಸಹಕಾರಿ ರತ್ನ ಶಂಭುಲಿಂಗ ಹೆಗಡೆ ನಿಡಗೋಡ, ವೈದ್ಯ ಡಾ.ಕೃಷ್ಣಪ್ರಸಾದ ಉಡುಪಿ ಅವರನ್ನು ಗೌರವಿಸಲಾಗುತ್ತಿದೆ. ಶ್ರೀಗಳು ಸಾನ್ನಿಧ್ಯ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.
ಸೆಪ್ಟೆಂಬರ್‌ 10ರ ತನಕ ನಡೆಯಲಿರುವ ಚಾತುರ್ಮಾಸ್ಯ ಅವಧಿಯಲ್ಲಿ ಮಹಾಭಾರತ ಪ್ರವಚನಗಳು, ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಶಿಷ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲುವಂತೆ ಮಠದ‌ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement