ಸಿಇಟಿ ರ್‍ಯಾಂಕ್ ರದ್ದು: ಹೈಕೋರ್ಟ್‍ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ಬೆಂಗಳೂರು: ಸಿಇಟಿ ರ್‍ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಮ್ಮ ನಿವಾಸದಲ್ಲಿ ಸೋಮವಾರ ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದ ಸಭೆಯಲ್ಲಿ ಏಕ ಸದಸ್ಯ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ.

ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, 25 ಸಾವಿರ ರಿಪೀಟರ್ಸ್ ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಹೊಸ ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯ ಆಗದಂತೆ ನಾವು ನಿರ್ಧಾರ ಮಾಡಲಾಗಿತ್ತು. ರಿಪೀಟರ್ಸ್‌ ಇದನ್ನು ಪ್ರಶ್ನಿಸಿ ಕೋರ್ಟಿಗೆ ಹೋದ ನಂತರ ಹೈಕೋರ್ಟ್ ರ್‍ಯಾಂಕ್ ಅನ್ನು ರದ್ದು ಮಾಡಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡು, ಒಂದೆಡರು ದ್ವಿ-ಸದಸ್ಯ ಪೀಠಕ್ಕೆ ಹೋಗುತ್ತೇವೆ. ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದ್ದು, ಯಾರಿಗೂ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಲಿದ್ದೇವೆ. ವಿದ್ಯಾರ್ಥಿಗಳಿಗೆ ಒಳ್ಳೆಯದು ಮಾಡಲು ನಾವು ಸಿದ್ದರಿದ್ದೇವೆ. ರಿಪೀಟರ್ಸ್ ವಿದ್ಯಾರ್ಥಿಗಳ ಮೇಲೆ ನಮಗೇನು ಕೋಪ ಇಲ್ಲ. ಟೆಕ್ನಕಲ್ ವಿಷಯದಿಂದ ಹೊಸ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ. ಎಲ್ಲರಿಗೂ ನ್ಯಾಯ ಕೊಡುವ ಕೆಲಸ ಮಾಡಲು ಕ್ರಮ ತೆಗೆದುಕೊಳ್ಳಲಿದ್ದೇವೆ. ಹಾಗೂ ಎಲ್ಲವೂ ಎಲ್ಲವೂ ಸಮಯದ ಒಳಗೆ ಮುಗಿಯಲಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement