ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.
ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕಿಸ್ತಾನದ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸಭೆ ಆಯೋಜಿಸಿತ್ತು. ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶದಲ್ಲಿ ಈ ಘಟನೆ ನಡೆಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್‌ ಆಯೋಜಿಸಿರುವ ಜನಾಕ್ರೋಶ ಸಭೆಯಲ್ಲಿ ಸಿಎಂ ಭಾಷಣ ಮಾಡುವಾಗ, ಬಿಜೆಪಿಯ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ಮಾಡಿ ಸಿಎಂ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು.ಕಾಂಗ್ರೆಸ್ ಸಮಾವೇಶಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆಗಮಿಸಿದ್ದರು. ಬೇರೆ ನಾಯಕರ ಭಾಷಣದವರೆಗೆ ಸುಮ್ಮನೇ ಕುಳಿತಿದ್ದ ಕಾರ್ಯಕರ್ತೆಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವಾಗ ಕಪ್ಪು ಪಟ್ಟಿಯನ್ನು ತೋರಿಸಿ ಪ್ರತಿಭಟಿಸಿದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

ಈ ವೇಳೆ ಸಂಯಮ ಕಳೆದುಕೊಂಡ ಸಿದ್ದರಾಮಯ್ಯ ಅಲ್ಲಿಯೇ ಇದ್ದ ಹೆಚ್ಚುವರಿ ಎಸ್‌ಪಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ಹಂತದಲ್ಲಿ ಕೋಪದಿಂದ ಸಂಯಮಕಳೆದುಕೊಂಡು ಅವರತ್ತ ಕೈ ಎತ್ತಿದ್ದಾರೆ.
ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿದ್ದರಾಮಯ್ಯ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಿದರು. ನಿಲ್ಲಿಸಿದ ಬಳಿಕ ಯಾರದು ಎಸ್‌ಪಿ ಎಂದು ಹೇಳಿ ವೇದಿಕೆಗೆ ಬರುವಂತೆ ಹೇಳಿದ್ದಾರೆ. ಹೆಚ್ಚುವರಿ ಎಸ್‌ಪಿ ಬರುತ್ತಿದ್ದಂತೆ ಏನ್ರೀ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಕೋಪ ಪ್ರದರ್ಶಿಸಿದರು. ನಂತರ ಸಚಿವ ಎಂಬಿ ಪಾಟೀಲ, ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement