ಎಚ್​3ಎನ್​2 ವೈರಸ್ ಸೋಂಕು ಪ್ರಕರಣ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕಳೆದ ಕೆಲವು ದಿನಗಳಿಂದ H3N2 ವೇರಿಯಂಟ್​​ನಿಂದ ದೇಶದಲ್ಲಿ ಇನ್‌ಫ್ಲ್ಯೂಂಜಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಸೋಮವಾರ ಬೆಳಿಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ H3N2 ಸೋಂಕಿನ ಬಗ್ಗೆ ಮಹತ್ವದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ನಿಯಂತ್ರಣ ಕ್ರಮಗಳ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿತ್ತು. ಈಗ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಈ ಋತುಕಾಲದ ರೋಗಗಳು ಬಾಧಿತ ಜನರು ಕೆಮ್ಮುವುದರಿಂದ, ಸೀನುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ. ಈ ರೋಗಗಳು 15 ವರ್ಷದಿಂದ ಕೆಳಗಿರುವ ಹಾಗೂ 65 ವರ್ಷದ ಮೇಲಿರುವ ವಯೋಮಾನದವರಿಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ವಯೋಮಾನದವರು ಹಾಗೂ ಎಲ್ಲರೂ ಬಹಳ ಎಚ್ಚರಿಕೆ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಜ್ವರ, ಚಳಿ, ಮೈ-ಕೈ ನೋವು, ತುರಿಕೆ, ಸೀನು ಪ್ರಮುಖವಾಗಿ ಕಂಡುಬರುತ್ತವೆ. ಕಲುಷಿತ ವಾತಾವರಣವಿದ್ದರೆ 3 ವಾರಗಳವರೆಗೆ ಸೋಂಕು ಇರುವ ಸಾಧ್ಯತೆ ಇದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಸೋಂಕು ತಡೆಗೆ ಮಾರ್ಗಸೂಚಿಗಳು…

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

*ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಹೆಲ್ತ್​ಕೇರ್ ಫೆಸಿಲಿಟಿ ಸಿಬ್ಬಂದಿಗೂ ಕಡ್ಡಾಯ.
* ಉಸಿರಾಟ ಸಂಬಂಧಿತ ಸೋಂಕು ಪ್ರಕರಣಗಳ ಮೇಲೆ ಸೂಕ್ತ ನಿಗಾವಹಿಸಬೇಕು. ಸಾರಿ, ಐಎಲ್ಐ ಪ್ರಕರಣಗಳ ಮಾದರಿ ಸಂಗ್ರಹಿಸಿ ಲ್ಯಾಬ್ ಗಳಿಗೆ ಕಳುಹಿಸಬೇಕು.
* ಉಸಿರಾಟ ಸಂಬಂಧಿತ ಸೋಂಕು ಪ್ರಕರಣಗಳ ಚಿಕಿತ್ಸೆ ವೇಳೆ ಆರೋಗ್ಯ ಸಿಬ್ಬಂದಿ ಮಾಸ್ಕ್ ಹಾಗೂ ಪಿಪಿಇ ಕಿಟ್ ಧರಿಸಬೇಕು. ಔಷಧಿ, ಆರೋಗ್ಯ ಇಲಾಖೆ ನೌಕರರಿಗೆ ಪಿಪಿಇ ಕಿಟ್, ಚಿಕಿತ್ಸೆ ಸೌಲಭ್ಯಗಳನ್ನು ಕಲ್ಪಿಸಬೇಕು
* ಹೈ ರಿಸ್ಕ್ ಪ್ರದೇಶಗಳಾದಂತ ಐಸಿಯುನಲ್ಲಿ ಕೆಲಸ ಮಾಡುವ ಸಿಬ್ಬಂದಿ, ಐಸೋಲೇಷನ್ ಕೇಂದ್ರದಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಫ್ಲೂ (ಜ್ವರದ) ವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಬೇಕು.
* ಎಲ್ಲ ಸಾರಿ ಸಾವಿನ ಪ್ರಕರಣಗಳು ಕೋವಿಡ್ ನೆಗೆಟಿವ್ ಇದ್ದರೂ ಕೂಡ ಹತ್ತಿರದ ವಿಆರ್‌ಡಿಎಲ್ ಲ್ಯಾಬ್‌ಗಳಿಗೆ ವರದಿ ಮಾಡಬೇಕು.
* ಸಾರ್ವಜನಿಕರಲ್ಲಿ ಹೆಚ್1ಎನ್1, ಹೆಚ್3ಎನ್2, ಇನ್‌ಫ್ಲ್ಯುಂಜಾ-ಬಿ, ಆರ್‌ಎಸ್‌ವಿ ಹಾಗೂ ಅಡಿನೋ ವೈರಸ್ ಬಗ್ಗೆ ಜಾಗೃತಿ ಮೂಡಿಸಬೇಕು.
* ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಕಾಲೋಚಿತ ಜ್ವರದ ರೋಗಲಕ್ಷಣದ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸ್ವಯಂ-ಔಷಧಿ ಮತ್ತು ಪ್ರತಿಜೀವಕಗಳ ಅನಗತ್ಯ ಬಳಕೆಯನ್ನು ತಪ್ಪಿಸಬೇಕು. ಏನೇನು ಅನುಸರಿಸಬೇಕು ಮತ್ತು ಏನು ಮಾಡಬಾರದು ಎಂಬ ವಿಷಯಗಳ ವಿವರವನ್ನು ಜನಜಾಗೃತಿಗಾಗಿ ಆಸ್ಪತ್ರೆಯ ಆವರಣದಲ್ಲಿ ಲಗತ್ತಿಸಬೇಕು.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement