ಮಂಗಳೂರು : ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ನಾಟಕ ಬ್ಯಾಂಕ್‌ನ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯಕಾರಿ ನಿರ್ದೇಶಕ ಶೇಖರ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿನ ಆಡಳಿತ ಮಂಡಳಿಯು ಈ ಸ್ಥಾನಗಳಿಗೆ ಹೊಸಬರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿದೆ.
ಕರ್ಣಾಟಕ ಬ್ಯಾಂಕ್ ಎಂಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ ಹರಿಹರ ಶರ್ಮಾ ಅವರು ಮುಂಬೈಗೆ ಸ್ಥಳಾಂತರಗೊಳ್ಳುವ ಕಾರಣದಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಶೇಖರ ರಾವ್ ಅವರು ಮಂಗಳೂರಿಗೆ ಸ್ಥಳಾಂತರಗೊಳ್ಳಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಬ್ಯಾಂಕಿನ ಆಡಳಿತ ಮಂಡಳಿಯು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ.
ಎಂಡಿ-ಸಿಇಒ ಶರ್ಮಾ ಅವರ ರಾಜೀನಾಮೆ ಜುಲೈ 15 ರಿಂದ ಜಾರಿಗೆ ಬರಲಿದೆ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ರಾವ್ ಅವರ ರಾಜೀನಾಮೆ ಜುಲೈ 31 ರಿಂದ ಜಾರಿಗೆ ಬರಲಿದೆ ಎಂದು ಕರ್ನಾಟಕ ಬ್ಯಾಂಕ್ ತಿಳಿಸಿದೆ. ಹೊಸ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹಾಗೂ ಹೊಸ ಕಾರ್ಯನಿರ್ವಾಹಕ ನಿರ್ದೇಶಕರ ಹುದ್ದೆಗೆ ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲು ಬ್ಯಾಂಕ್ ಶೋಧ ಸಮಿತಿಯನ್ನು ರಚಿಸಿದೆ.
ಇದೇ ವೇಳೆ ಅನುಭವಿ ಹಿರಿಯ ಬ್ಯಾಂಕರ್ ಅನ್ನು ಮುಖ್ಯ ಕಾರ್ಯಾಚರಣಾ ಅಧಿಕಾರಿಯಾಗಿ (COO) ನೇಮಿಸಿದ್ದು, ಅವರು ಜುಲೈ 2ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬ್ಯಾಂಕ್ ತಿಳಿಸಿದೆ. 40 ವರ್ಷಗಳ ಅನುಭವ ಹೊಂದಿರುವ ಶರ್ಮಾ ಅವರು ಕರ್ನಾಟಕ ಬ್ಯಾಂಕಿಗೆ ಮೇ 2023 ರಲ್ಲಿ ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದರು. ಹಾಗೂ ಮೊದಲ ಬಾಹ್ಯ ಸಿಇಒ ಆಗಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ