ಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ (Cows) ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬವರು ದೂರು ನೀಡಿದ ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶೇಕ್ ನಸ್ರು (30) ಎಂದು ಗುರುತಿಸಲಾಗಿದ್ದು, ಈತ ಬಿಹಾರ ರಾಜ್ಯದ ಚಂಪಾರನ್ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಈತ ಸಹಾಯಕನಾಗಿ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಈ ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿರುವುದು ಕಂಡುಬಂದಿಲ್ಲ. ಆದರೂ ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹಸುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿವೆ ಎನ್ನಲಾಗಿದೆ.
ವಿನಾಯಕನಗರ ನಿವಾಸಿ ಕರ್ಣ ಅವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆಯಲಾಗಿತ್ತು. ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement