ಆಧಾರ- ಪ್ಯಾನ್ ನಂಬರ್‌ ಜೋಡಣೆ ಗಡುವು ಸೆ.30ರ ವರೆಗೆ ವಿಸ್ತರಣೆ

ನವದೆಹಲಿ: ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಕಾಲಾವಕಾಶವನ್ನು ಮತ್ತೆ ಮೂರು ತಿಂಗಳು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ಈ ಮೊದಲು ಜೋಡಣೆಗೆ ಜೂನ್ 30 ಕೊನೆಯ ದಿನವಾಗಿತ್ತು. ಆದರೆ ಕೋವಿಡ್‌ ಪರಿಸ್ಥಿತಿ ಗಮನದಲ್ಲಿಟ್ಟು ಈಗ ಸೆಪ್ಟೆಂಬರ್ 30ರ ವರೆಗೆ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ಕೋವಿಡ್ -19 ರ ಕಾರಣಕ್ಕಾಗಿ ಸರ್ಕಾರವು ಈಗಾಗಲೇ ಮೂರು ಬಾರಿ ಗಡುವು ವಿಸ್ತರಿಸಿದೆ. ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ಮಾಡಿದ ಘೋಷಣೆ ಮಾಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

ನಿಮ್ಮ ಕಾಮೆಂಟ್ ಬರೆಯಿರಿ

advertisement