ಥೈಲ್ಯಾಂಡ್‌ನಲ್ಲಿ ಭೀಕರ ರೈಲು ಅಪಘಾತ: ಕ್ರೇನ್ ಬಿದ್ದು 22 ಪ್ರಯಾಣಿಕರು ಸಾವು

ಬ್ಯಾಂಕಾಕ್: ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್‌ನಿಂದ ಈಶಾನ್ಯ ಭಾಗಕ್ಕೆ ಸಂಚರಿಸುತ್ತಿದ್ದ ರೈಲಿನ ಮೇಲೆ ನಿರ್ಮಾಣ ಹಂತದ ಕಾಮಗಾರಿ ಮಾಡುತ್ತಿದ್ದ ಬೃಹತ್ ಕ್ರೇನ್ ಒಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಖೋನ್ ರಾಚಸಿಮಾ ಪ್ರಾಂತ್ಯದ ಸಿಖಿಯು ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ. ಉಬೋನ್ ರಾಚಥಾನಿ ಪ್ರಾಂತ್ಯಕ್ಕೆ ತೆರಳುತ್ತಿದ್ದ ರೈಲು ಈ ಮಾರ್ಗದಲ್ಲಿ ಹಾದುಹೋಗುವಾಗ, ಹತ್ತಿರದಲ್ಲೇ ನಡೆಯುತ್ತಿದ್ದ ಹೈಸ್ಪೀಡ್ ರೈಲು ಯೋಜನೆಯ ಕಾಮಗಾರಿಯ ಕ್ರೇನ್ ರೈಲಿನ ಬೋಗಿಯ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ರೈಲು ಹಳಿ ತಪ್ಪಿ, ಕೆಲಕಾಲ ಬೆಂಕಿ ಕಾಣಿಸಿಕೊಂಡಿತ್ತು.
“ಈ ಅಪಘಾತದಲ್ಲಿ 22 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ,” ಎಂದು ನಖೋನ್ ರಾಚಸಿಮಾ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಥಾಚಪೋನ್ ಚಿನ್ನವಾಂಗ್ ಅವರು ಸುದ್ಧಿಸಂಸ್ಥೆ ಎಎಫ್‌ಪಿ (AFP) ಗೆ ಖಚಿತಪಡಿಸಿದ್ದಾರೆ.
ಸದ್ಯ ರೈಲಿನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement