ಮುಂಡಗೋಡ: ಗ್ರಾಮ ಪಂಚಾಯತ ಸದಸ್ಯೆ ಕೊಲೆ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಪಾಳಾ ಗ್ರಾಮ ಪಂಚಾಯತ ಸದಸ್ಯೆ ಅಕ್ಕಮ್ಮ ಬಸವರಾಜ ಮೇಲಿನಮನಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಗಂಡನೇ ಕೊಲೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಆದರೆ ಆತನ ಮೇಲೆಯೇ ಸಂಶಯ ವ್ಯಕ್ತವಾಗಿದೆ. ತೀವ್ರ ಅಸ್ವಸ್ಥಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಆವರಣದಲ್ಲಿಯೇ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಮಧ್ಯರಾತ್ರಿ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ ಮೃತ ಸದಸ್ಯೆಯು ಕಾಂಗ್ರೆಸ್ ಬೆಂಬಲಿತ ಸದಸ್ಯೆಯಾಗಿದ್ದಾಳೆ.

ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ ಮಬನೂರ ಭೇಟಿ ನೀಡಿದ್ದಾರೆ. ಮೃತದೇಹದ ಸುತ್ತಲೂ ಕುಂಕುಮ ಚೆಲ್ಲಲಾಗಿದ್ದು, ಮನೆಯ ಒಳಗೆ ಹಾಗೂ ಹೊರಗೆ ಚುನಾವಣಾ ಕರಪತ್ರಗಳನ್ನು ಇಟ್ಟು ಅವುಗಳ ಮೇಲೆ ಹುಲ್ಲು, ಕುಂಕುಮ ಇಡಲಾಗಿದೆ. ವಾಮಾಚಾರಕ್ಕಾಗಿ ನಡೆದ ಕೊಲೆಯೋ ಅಥವಾ ಇನ್ಯಾವುದೋ ಕಾರಣಕ್ಕೆ ನಡೆದ ಕೊಲೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement