ಸಾರಿಗೆ ನಿಗಮಕ್ಕೆ ೪ ಸಾವಿರ ಕೋಟಿ ರೂ.ನಷ್ಟ:ಸವದಿ

ಬೆಂಗಳೂರು: ಕೊವಿಡ್‌ ಪರಿಣಾಮದಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ೪ ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ವಿಧಾನ ಪರಿಷತ್ತಿಗೆ ಶುಕ್ರವಾರ ತಿಳಿಸಿದರು.
ಶು ೨,೯೮೦ ಕೋಟಿ ರೂ. ನಿವ್ವಳ ಆದಾಯವೇ ನಷ್ಟವಾಗಿದೆ. ಹೀಗಾಗಿ ಸಾರಿಗೆ ಸಂಸ್ಥೆಗಳು ನಷ್ಟ ಅನುಭವಿಸುವಂತೆ ಆಗಿವೆ ಎಂದು ಹೇಳಿದರು.
ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಪ್ರಶ್ನೆಗೆ ಉತ್ತರಿಸಿದಅವರು, ಮುಂಗಡ ಪತ್ರದಲ್ಲಿ ಈ ನಷ್ಟ ಸರಿದೂಗಿಸಲು ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಮುಂಗಡ ಪತ್ರದಲ್ಲಿ ಮುಖ್ಯಮಂತ್ರಿಗಳೂ ಕೂಡ ಹಣಕಾಸಿನ ಇತಿಮಿತಿಯಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ರಾಜ್ಯದ ವಿವಿಧ ಭಾಗಗಳಿಂದ ಶಾಸಕರು ಹೊಸಬಸ್ ಗಳ ಖರೀದಿ, ಬಸ್ ನಿಲ್ದಾಣಗಳ ಆರಂಭ, ಹೊಸ ಬಸ್ ಗಳ ಖರೀದಿ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಆದರೆ, ಕೊರೊನಾ ಸೋಂಕಿನ ಆರ್ಥಿಕ ಪರಿಸ್ಥಿತಿಯಿಂದ ಸಾಧ್ಯವಾಗುತ್ತಿಲ್ಲ. ಮುಂಗಡ ಪತ್ರ ಮಂಡನೆಯಾದ ನಂತರ ಇದಕ್ಕೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದರು.
ಬೆಂಗಳೂರಿನಲ್ಲಿ ಇರುವಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸ್ಯಾಟ್‌ಲೈಟ್ ಬಸ್ ನಿಲ್ದಾಣಮಾಡುವ ಉದ್ದೇಶವಿದೆ. ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬಂದರೆ, ಅಲ್ಲಿ ಅವರಿಗೆ ಶಾಪಿಂಗ್ ಜೊತೆಗೆ, ಮನರಂಜನೆ ಸಿಗುವಂತೆ, ಚಿತ್ರಮಂದಿರಗಳನ್ನು ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ. ದಾವಣಗೆರೆಯಲ್ಲಿ ೧೦೦ ಕೋಟಿ ರೂ. ವೆಚ್ಚದಲ್ಲಿ ಈ ರೀತಿಯ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement