ವಿದೇಶಾಂಗ ಸಚಿವ ಜೈಶಂಕರಗೆ ಕೊರೊನಾ ಸೋಂಕು

ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಅವರಿಗೆ ಗುರುವಾರ ಕೋವಿಡ್-19 ಸೋಂಕು ದೃಢಪಟ್ಟಿದೆ.

ಟ್ವಿಟ್ಟರಿನಲ್ಲಿ ಮಾಹಿತಿ ನೀಡಿರುವ ಅವರು, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ನನಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕು ಎಂದು ವಿನಂತಿಸುತ್ತೇನೆ ಎಂದು ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಜೈಶಂಕರ್ ಅವರು ಫ್ರಾನ್ಸ್‌ನಲ್ಲಿ ಭಾರತಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಲು ಫ್ರೆಂಚ್ ಕೌಂಟರ್‍ಪಾರ್ಟ್ ಜೀನ್-ಯ್ವೆಸ್ ಲೆ ಡ್ರಿಯನ್ ಅವರನ್ನು ಭೇಟಿ ಮಾಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement