ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾನುವಾರ ಮಳೆಯಾಗಲಿದೆ. ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಹೊಸದುರ್ಗ, ಕಡೂರು, ಕೊಟ್ಟಿಗೆಹಾರ, ಎನ್​ಆರ್​ಪುರ, ಜಯಪುರ, ಅಜ್ಜಂಪುರ, ನಾಯಕನಹಟ್ಟಿ, ತರೀಕೆರೆ, ಯುಗಟಿ, ಬೇಲೂರು, ಮೂರ್ನಾಡು, ಹುಂಚದಕಟ್ಟೆ, ಮಂಗಳೂರು ವಿಮಾನ ನಿಲ್ದಾಣ, ಭಾಗಮಂಡಲ, ವೈ.ಎನ್. ಹೊಸಕೋಟೆ, ಸಿರಾ, ಬಾಳೆಹೊನ್ನೂರು, ಸಕಲೇಶಪುರದಲ್ಲಿ ಮಳೆಯಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement