ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರಕಾರದಿಂದ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಇಂದು, ಗುರುವಾರ ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ದೇವರ ಹೆಸರಿನಲ್ಲಿ ಕನ್ನಡದಲ್ಲಿ ವೀರೇಂದ್ರ ಹೆಗ್ಗಡೆಯವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವೀರೇಂದ್ರ ಹೆಗ್ಗಡೆಯವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಡಾ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ಬರಮಾಡಿಕೊಂಡರು.
ನಿಮ್ಮ ಕಾಮೆಂಟ್ ಬರೆಯಿರಿ