ಅನುಮತಿಯಿಲ್ಲದೆ ಅಮಿತಾಭ್ ಚಿತ್ರ, ಹೆಸರು, ಧ್ವನಿ ಬಳಸುವಂತಿಲ್ಲ: ದೆಹಲಿ ಹೈಕೋರ್ಟ್‌ ಮಧ್ಯಂತರ ಆದೇಶ

ನವದೆಹಲಿ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಮತ್ತು ಧ್ವನಿಯನ್ನು ಅವರ ಒಪ್ಪಿಗೆ ಇಲ್ಲದೆ ಬಳಸುವುದನ್ನು ನಿರ್ಬಂಧಿಸಿ ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ನೀಡಿದೆ.
ಹಲವು ಸಂಸ್ಥೆಗಳು‌‌ / ವ್ಯಕ್ತಿಗಳು ತಮ್ಮ ಅನುಮತಿ ಇಲ್ಲದೆ ತಮ್ಮ ಫೋಟೋ, ಹೆಸರು ಹಾಗೂ ಧ್ವನಿಯನ್ನು ಬಳಸುತ್ತಿದ್ದು, ಅವುಗಳಿಗೆ ನಿರ್ಬಂಧ ಹೇರಬೇಕು ಎಂದು ಕೋರಿ ಅಮಿತಾಭ್‌ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಅಮಿತಾಭ್‌ ಬಚ್ಚನ್‌ ಅವರ ಚಿತ್ರ, ಧ್ವನಿ, ಹೆಸರು ಹಾಗೂ ವ್ಯಕ್ತಿತ್ವ ಗುಣಲಕ್ಷಣಗಳನ್ನು ಅವರ ಅನುಮತಿ ಇಲ್ಲದೇ ಬಳಸುವಂತಿಲ್ಲ ಎಂದು ಆದೇಶಿಸಿದೆ. ಹಾಗೂ ಅನುಮತಿ ಇಲ್ಲದೆ ಬಳಸಿರುವುದನ್ನು ತೆಗೆದುಹಾಕಿ ಎಂದು ವಿದ್ಯುನ್ಮಾನ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಅರ್ಜಿದಾರರು ಸುಪ್ರಸಿದ್ಧ ವ್ಯಕ್ತಿಯಾಗಿದ್ದಾರೆ ಮತ್ತು ವಿವಿಧ ಜಾಹೀರಾತುಗಳಲ್ಲಿಯೂ ಸಹ ಪ್ರತಿನಿಧಿಸಲ್ಪಟ್ಟಿದ್ದಾರೆ. ಅವರ ಅನುಮತಿಯಿಲ್ಲದೆ ಸರಕು ಮತ್ತು ಸೇವೆಗಳನ್ನು ಪ್ರಚಾರ ಮಾಡಲು ಅವರ ಪ್ರಸಿದ್ಧ ಸ್ಥಾನಮಾನವನ್ನು ಬಳಸಿಕೊಂಡಿರುವುದಕ್ಕೆ ಅವರು ನೊಂದಿದ್ದಾರೆ ಎಂದು ನ್ಯಾಯಾಲಯವು ಹೇಳಿದೆ.
ಅಮಿತಾಭ್ ಬಚ್ಚನ್ ಅವರ ವ್ಯಕ್ತಿತ್ವದ ಹಕ್ಕುಗಳನ್ನು ಉಲ್ಲಂಘಿಸುವ ವಿಷಯವನ್ನು ತೆಗೆದುಹಾಕುವಂತೆ ನ್ಯಾಯಾಲಯವು ಅಧಿಕಾರಿಗಳು ಮತ್ತು ಟೆಲಿಕಾಂ ಸೇವಾ ಪೂರೈಕೆದಾರರಿಗೆ ನಿರ್ದೇಶನಗಳನ್ನು ನೀಡಿದೆ.

ಪ್ರಮುಖ ಸುದ್ದಿ :-   ಅಮಿತ್ ಶಾ ವೀಡಿಯೊ ತಿರುಚಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸಮನ್ಸ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement