ವಾಯುಭಾರ ಕುಸಿತ : ಕೆಲವು ಜಿಲ್ಲೆಗಳಲ್ಲಿ ಚಳಿ ತೀವ್ರತೆ ಹೆಚ್ಚಳ ; ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ತಿಳಿಸಿದೆ.
ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಚಳಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವಿಪರೀತ ಚಳಿ ಇರಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಜನವರಿ 14ರ ವರೆಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆ ಆಗಲಿದೆ. ಮುಂದಿನ ಹಲವು ದಿನಗಳವರೆಗೂ ಇದೇ ರೀತಿಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆಯನ್ನ ನೀಡಿದೆ.

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement