ಕಾಮೆಡ್‌-ಕೆ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು : ರಾಜ್ಯದಲ್ಲಿನ ಖಾಸಗಿ ಕಾಲೇಜುಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಭರ್ತಿಗಾಗಿ ನಡೆಸಲಾಗುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ.
ಜೂನ್ 20ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಕಾಮೆಡ್-ಕೆ ತಿಳಿಸಿದೆ.
ಈ ಕುರಿತಂತೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ.ಕುಮಾರ್ ಅವರು, ಈ ಸಲದ ಕಾಮೆಡ್-ಕೆ ಪರೀಕ್ಷೆ ಜೂನ್ 20ರಂದು ನಡೆಸಲಾಗುತ್ತದೆ ಎಂದು ತಿಳಿಸಿದರು.
150ಕ್ಕೂ ಹೆಚ್ಚು ನಗರಗಳು, 400ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ.ಜೂನ್ 20ರಂದು ನಡೆಯಲಿರುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳು ಮಾರ್ಚ್ 22 ರಿಂದ ಮೇ.20ರ ವರೆಗೆ www.comedk.org ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂಬುದಾಗಿ ಮಾಹಿತಿ ನೀಡಿದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement