ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ ಬಂಧನ

ಕಲಬರುಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ಹಗರಣ (KEA exam scam)ದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ (Rudra gowda Patil) ನನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲಾ ವಿಶೇಷ ಪೊಲೀಸ್ ತಂಡದವರು ಕಾರ್ಯಾಚರಣೆ ನಡೆಸಿ, ಅಫಜಲಪುರ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಆರ್.ಡಿ. ಪಾಟೀಲನನ್ನು ಬಂಧಿಸಿದ್ದಾರೆ. ಆತನನ್ನು ಕಲಬುರ್ಗಿಗೆ ಕರೆ ತಂದಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಕಳೆದ 12 ದಿನಗಳಿಂದ ಆರ್.ಡಿ ಪಾಟೀಲ ತಲೆಮರೆಸಿಕೊಂಡಿದ್ದ.
ಕೆಲ ದಿನಗಳ ಹಿಂದೆ ಅಪಾರ್ಟ್‌ಮೆಂಟ್‌ನಲ್ಲಿದ್ದ ಆತನನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ಹೋದಾಗ ಅಲ್ಲಿ ಕಾಂಪೌಂಡ್ ಹಾರಿ ಆತ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಆತ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದ. ಆದರೆ ಆ ಅರ್ಜಿ ತಿರಸ್ಕೃತವಾಗಿತ್ತು.

ಕಲಬುರಗಿಯ ವರದಾ ಲೇಔಟ್​​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್​​ನಲ್ಲಿದ್ದ ಆರ್.ಡಿ.ಪಾಟೀಲ ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಅಲ್ಲಿಂದ ಕಾಂಪೌಂಡ್‌ ಹಾರಿ ಪರಾರಿಯಾಗಿದ್ದ. ಆರ್ ಡಿ ಪಾಟೀಲ್​​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ಕಾರಣಕ್ಕೆ ಶಹಾಪುರದ ಶಂಕರಗೌಡ ಯಾಳವಾರ ಮತ್ತು ಅಪಾರ್ಟಮೆಂಟ್​​ ವ್ಯವಸ್ಥಾಪಕ ದಿಲೀಪ ಪವಾರ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಕ್ಟೋಬರ್ 28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಾಗಿ ಪರೀಕ್ಷೆ ನಡೆಸಿತ್ತು. ಮೊದಲ ದಿನ ನಡೆದ ಎಫ್​ಡಿಎ ಪರೀಕ್ಷೆ ವೇಳೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿರುವುದು ಬೆಳಕಿಗೆ ಬಂದಿತ್ತು. ಈ ಅಕ್ರಮದ ಬೆನ್ನಿಗೆ ಅಕ್ರಮದಲ್ಲಿ ಭಾಗಿಯಾದವರನ್ನು ಬಂಧಿಸಿದಾಗ ಆರ್‌.ಡಿ. ಪಾಟೀಲ ಹೆಸರು ಕೇಳಿಬಂದಿತ್ತು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement