ಕೊರೊನಾ ಲಸಿಕೆ ರಫ್ತು ವಿರೋಧಿಸಿದ ರಾಹುಲ್‌ ಗಾಂಧಿ

ನವದೆಹಲಿ: ವಿದೇಶಗಳಿಗೆ ಕೋವಿಡ್-19 ಲಸಿಕೆಗಳನ್ನು ರಫ್ತು ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶವಾಸಿಗಳು ಅಪಾಯದಲ್ಲಿರುವಾಗ ಲಸಿಕೆಗಳನ್ನು ರಫ್ತು ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಲಸಿಕೆ ನೀಡುವಿಕೆಯಲ್ಲಿ ಕೇಂದ್ರ ಸರ್ಕಾರ ಪಕ್ಷಪಾತ ಮಾಡಬಾರದು. ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಮಾಡಬೇಕು. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಲಸಿಕೆ ಕೊರತೆ ಅತ್ಯಂತ ಗಂಭೀರ ವಿಚಾರವಾಗಿದೆ. ಕೊರತೆ ಇರುವ ರಾಜ್ಯಗಳಿಗೆ ಮೊದಲು ಲಸಿಕೆ ಪೂರೈಸಲು ಕ್ರಮ ಕೈಗೊಳ್ಳಬೇಕು. ಇಂಥ ಸಂದರ್ಭದಲ್ಲಿ ದೇಶದ ಜನರು ಅಪಾಯದಲ್ಲಿರುವಾಗ ಲಸಿಕೆಗಳನ್ನು ರಫ್ತು ಮಾಡುವುದು ಎಷ್ಟರ ಮಟ್ಟಿಗೆ ಸೂಕ್ತ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ಪಕ್ಷಪಾತ ಮಾಡದೆ ಎಲ್ಲರಿಗೂ ಲಸಿಕೆ ನೀಡುವ ಕೆಲಸ ಮಾಡಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement