ಹೆಜಮಾಡಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಮೂವರು ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಸಮುದ್ರ ಪಾಲಾದವರನ್ನು ಹೆಜಮಾಡಿಯ ಅಕ್ಷಯ ಮತ್ತು ಅಮನ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಕಾಪಾಡಿದ ನಾಲ್ವರು ಯುವಕರು ನೀರು ಕುಡಿದು ಅಸ್ವಸ್ಥರಾಗಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement